×
Ad

ಮಂಜೇಶ್ವರ: ರೈಲ್ವೆ ಹಳಿ ಸಮೀಪದ ವಿದ್ಯುತ್ ಕಂಬದಲ್ಲಿ ವ್ಯಕ್ತಿ ಆತ್ಮಹತ್ಯೆ

Update: 2023-12-06 14:16 IST

ಕಾಸರಗೋಡು, ಡಿ.6: ಅಪರಿಚಿತ ವ್ಯಕ್ತಿಯೋರ್ವನ ಮೃತದೇಹ ರೈಲ್ವೆ ಹಳಿ ಸಮೀಪದ ವಿದ್ಯುತ್ ಕಂಬಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಮಂಜೇಶ್ವರದಲ್ಲಿ ನಡೆದಿದೆ.

ಮಂಜೇಶ್ವರ ರೈಲ್ವೆ ನಿಲ್ದಾಣ ಸಮೀಪದ ವಿದ್ಯುತ್ ಕಂಬದಲ್ಲಿ ಇಂದು ಬೆಳಗ್ಗೆ ಮೃತದೇಹ ಪತ್ತೆಯಾಗಿದೆ. ಎರಡು ಕಾಲುಗಳಲ್ಲಿ ಗಾಯಗಳು ಕಂಡುಬಂದಿವೆ. ಒಳಉಡುಪು ಮಾತ್ರ ದೇಹದಲ್ಲಿದೆ.

ಸುಮಾರು 45 ವರ್ಷ ಪ್ರಾಯ ಅಂದಾಜಿಸಲಾಗಿದೆ. ಮಂಜೇಶ್ವರ ಠಾಣಾ ಪೊಲೀಸರು ಸ್ಥಳಕ್ಕಾಮಿಸಿ ಮಹಜರು ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News