×
Ad

ಮಂಜೇಶ್ವರ: ಎಸ್ಐ, ಪೊಲೀಸ್‌ ಸಿಬ್ಬಂದಿ ಮೇಲೆ ತಂಡದಿಂದ ಹಲ್ಲೆ

Update: 2023-09-03 19:39 IST

ಮಂಜೇಶ್ವರ : ಠಾಣೆಯ ಎಸ್‌ಐ ಮತ್ತು ಪೊಲೀಸ್‌ ಸಿಬ್ಬಂದಿ ಮೇಲೆ ತಂಡವೊಂದು ಹಲ್ಲೆ ನಡೆಸಿದ ಘಟನೆ ಇಂದು ಮುಂಜಾನೆ ಉಪ್ಪಳ ಸಮೀಪದ ಹಿದಾಯತ್ ನಗರದಲ್ಲಿ ನಡೆದಿದೆ.

ಈ ಬಗ್ಗೆ ಐದು ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಹಲ್ಲೆಯಿಂದ ಮಂಜೇಶ್ವರ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಪಿ. ಅನೂಪ್ ಹಾಗೂ ಪೊಲೀಸ್ ಸಿಬ್ಬಂದಿ ಕಿಶೋರ್ ಎಂಬವರು ಗಾಯಗೊಂಡಿದ್ದಾರೆ. ಅವರನ್ನು ಉಪ್ಪಳದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮುಂಜಾನೆ ಕರ್ತವ್ಯದಲ್ಲಿದ್ದ ವೇಳೆ ಗುಂಪು ಸೇರಿರುವುದನ್ನು ಗಮನಿಸಿದ ಪೊಲೀಸರು ಸ್ಥಳಕ್ಕೆ ತಲಪಿದ್ದು, ಸ್ಥಳದಿಂದ ತೆರಳುವಂತೆ ಸೂಚನೆ ನೀಡಿದರು. ಆದರೆ ತಂಡವು ಪೊಲೀಸರನ್ನು ಲೆಕ್ಕಿಸದೆ ಪರಸ್ಪರ ಮಾತಿನ ಚಕಮಕಿಯಲ್ಲಿ ತೊಡಗಿದ್ದು, ನಿಯಂತ್ರಿಸಲು ಮುಂದಾದಾ ಪೊಲೀಸರಿಗೆ ತಂಡ ಹಲ್ಲೆ ನಡೆಸಿದೆ ಎಂದು ದೂರಲಾಗಿದೆ. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News