×
Ad

ಮಂಜೇಶ್ವರ: ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ

Update: 2024-10-17 09:13 IST

ಮಂಜೇಶ್ವರ: ಎರಡು ವಾರಗಳ ಹಿಂದೆಯಷ್ಟೇ ಕೊಲ್ಲಿ ರಾಷ್ಟ್ರದಿಂದ ಊರಿಗೆ ಮರಳಿದ್ದ ಯುವಕನೊಬ್ಬನ ಮೃತದೇಹ ನೇಣು ಬಿಗಿದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ತೂಮಿನಾಡು ಕುಚ್ಚಿಕ್ಕಾಡ್‌ನ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುವ ಕೆ.ಎಚ್. ಮುಹಮ್ಮದ್ ಎಂಬವರ ಪುತ್ರ ಮುಹಮ್ಮದ್ ಅನ್ಸಾರ್ (32) ಸಾವನ್ನಪ್ಪಿದ ಯುವಕ. ಕಳೆದ ರಾತ್ರಿ 11 ರ ಸುಮಾರಿಗೆ ಕೊಠಡಿಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಮುಹಮ್ಮದ್ ಅನ್ಸಾರ್ ಪತ್ತೆಯಾಗಿದ್ದರೆನ್ನಲಾಗಿದ್ದು, ಕೂಡಲೇ ಆಸ್ಪತ್ರೆಗೆ ತಲುಪಿಸಿದರೂ ಜೀವವನ್ನು ರಕ್ಷಿಸಲಾಗಲಿಲ್ಲ ಎಂದು ತಿಳಿದು ಬಂದಿದೆ.

ಚಾಲಕನಾಗಿ ಕೆಲಸ ನಿರ್ವಹಿಸುತ್ತಿದ್ದ ಈತ ಬಳಿಕ ಐದು ತಿಂಗಳ ಹಿಂದೆ ಕೊಲ್ಲಿ ರಾಷ್ಟ್ರಕ್ಕೆ ತೆರಳಿ ಎರಡು ವಾರಗಳ ಹಿಂದೆಯಷ್ಟೇ ಊರಿಗೆ ಮರಳಿದ್ದಾನೆನ್ನಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News