×
Ad

ಮಂಜೇಶ್ವರ | ದಾಖಲೆಗಳಿಲ್ಲದ 75 ಲಕ್ಷ ರೂ. ನಗದು ವಶ: ಮೂವರು ಕಸ್ಟಡಿಗೆ

Update: 2025-10-16 13:02 IST

ಕಾಸರಗೋಡು: ಕಾರಿನಲ್ಲಿ ದಾಖಲೆಗಳಿಲ್ಲದೆ ಸಾಗಾಟ ಮಾಡುತ್ತಿದ್ದ 75 ಲಕ್ಷ ರೂ.ವನ್ನು ಹೆದ್ದಾರಿ ತಪಾಸಣಾ ಪೊಲೀಸರು ಇಂದು ಬೆಳಗ್ಗೆ ಮಂಜೇಶ್ವರದಲ್ಲಿ ವಶಕ್ಕೆ ತೆಗೆದುಕೊಂಡಿದ್ದಾರೆ.

ಈ ಸಂಬಂಧ ಮೂವರನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಮಂಗಳೂರು ಕಡೆಯಿಂದ ಬರುತ್ತಿದ್ದ ಕಾರನ್ನು ಸಂಶಯದ ಮೇರೆಗೆ ತಪಾಸಣೆ ನಡೆಸಿದಾಗ ಲಕ್ಷಾಂತರ ರೂ. ನಗದು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ತನಿಖೆ ಮುಂದುವರಿದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News