×
Ad

ಕಾಸರಗೋಡು | ಶಾಲೆಯಲ್ಲಿ ಫೆಲೆಸ್ತೀನ್ ಪರ ಮೂಕಾಭಿನಯ ಪ್ರದರ್ಶನ ತಡೆದ ಶಿಕ್ಷಕರು; ಎಂಎಸ್ಎಫ್, ಎಸ್ಎಫ್ಐ ಪ್ರತಿಭಟನೆ

Update: 2025-10-04 16:34 IST

ಸಾಂದರ್ಭಿಕ ಚಿತ್ರ (AI-Grok)

ಕಾಸರಗೋಡು: ಫೆಲೆಸ್ತೀನ್ ಪರ ಮೂಕಾಭಿನಯ ಮಾಡದಂತೆ ವಿದ್ಯಾರ್ಥಿಗಳನ್ನು ಶಿಕ್ಷಕರು ತಡೆದಿದ್ದಾರೆ ಎಂಬ ಆರೋಪದ ಮೇಲೆ ವಿದ್ಯಾರ್ಥಿ ಸಂಘಟನೆಗಳಾದ ಎಂಎಸ್ಎಫ್ ಮತ್ತು ಎಸ್ಎಫ್ಐ ಶನಿವಾರ ಪ್ರತಿಭಟನೆ ನಡೆಸಿದೆ.

ಕುಂಬಳ ಸರಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಶುಕ್ರವಾರ ನಡೆದ ಶಾಲಾ ಕಲಾ ಉತ್ಸವದ ಸಂದರ್ಭದಲ್ಲಿ ಫೆಲೆಸ್ತೀನ್ ಪರ ಮೂಕಾಭಿನಯವನ್ನು ಇಬ್ಬರು ಶಿಕ್ಷಕರು ಮಧ್ಯಪ್ರವೇಶಿಸಿ ನಿಲ್ಲಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ತೀವ್ರ ಟೀಕೆಗೆ ಗುರಿಯಾಗಿದೆ.

ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ನ ವಿದ್ಯಾರ್ಥಿ ಘಟಕ ಎಂಎಸ್ಎಫ್ ಮತ್ತು ಎಸ್ಎಫ್ಐ ಕಾರ್ಯಕರ್ತರು ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ. ಫೆಲೆಸ್ತೀನ್‌ ಪರ ಮೂಕಾಭಿನಯ ಮಾಡದಂತೆ ಶಿಕ್ಷಕರು ವಿದ್ಯಾರ್ಥಿಗಳನ್ನು ಕೊಠಡಿಯೊಳಗೆ ಕೂಡಿ ಹಾಕಿ ಹಾಕಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ಪೊಲೀಸರು ಪ್ರತಿಭಟನಾಕಾರರನ್ನು ಸ್ಥಳದಿಂದ ವಾಪಾಸ್ಸು ಕಳುಹಿಸಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಶಾಲಾ ಆವರಣದಲ್ಲಿ ಹೆಚ್ಚಿನ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News