×
Ad

ಕಾರ್ಮಿಕ ಸಂಘಟನೆಗಳ ರಾಷ್ಟ್ರೀಯ ಮುಷ್ಕರ; ಕಾಸರಗೋಡಿನಲ್ಲಿ ಉತ್ತಮ ಸ್ಪಂದನೆ

Update: 2026-02-12 13:59 IST

ಕಾಸರಗೋಡು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ಹಾಗೂ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕಾರ್ಮಿಕ ಸಂಘಟನೆಗಳ ಸಂಯುಕ್ತ ಒಕ್ಕೂಟ ಕರೆ ನೀಡಿರುವ ರಾಷ್ಟ್ರೀಯ ಮುಷ್ಕರಕ್ಕೆ ಕಾಸರಗೋಡು ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಮುಷ್ಕರದ ಪರಿಣಾಮವಾಗಿ ಜಿಲ್ಲೆಯಲ್ಲಿ ಕೆಎಸ್‌ಆರ್‌ಟಿಸಿ ಹಾಗೂ ಖಾಸಗಿ ಬಸ್‌ಗಳು ರಸ್ತೆಗಿಳಿಯಲಿಲ್ಲ. ಆಟೋ ರಿಕ್ಷಾ ಹಾಗೂ ಟ್ಯಾಕ್ಸಿಗಳ ಸಂಚಾರವೂ ಬಹುತೇಕ ಸ್ಥಗಿತಗೊಂಡಿತ್ತು. ಆದರೆ ದ್ವಿಚಕ್ರ ವಾಹನಗಳು ಮತ್ತು ಖಾಸಗಿ ಕಾರುಗಳು ಕೆಲವೆಡೆ ಸಂಚಾರ ನಡೆಸುತ್ತಿದ್ದವು.

ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾದ ಹಿನ್ನೆಲೆ ನಗರದ ವ್ಯಾಪಾರ ಸಂಸ್ಥೆಗಳು ಮುಚ್ಚಲ್ಪಟ್ಟಿದ್ದವು. ನಗರದಾದ್ಯಂತ ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದವು. ಕೆಲ ಗ್ರಾಮೀಣ ಪ್ರದೇಶಗಳಲ್ಲಿ ಮಾತ್ರ ಆಟೋ ರಿಕ್ಷಾಗಳು ಸಂಚಾರ ನಡೆಸುತ್ತಿದ್ದವು ಎಂದು ತಿಳಿದು ಬಂದಿದೆ.

ಮುಷ್ಕರದ ಪರಿಣಾಮವಾಗಿ ವಾಹನಗಳ ಕೊರತೆಯಿಂದ ಸರ್ಕಾರಿ ಕಚೇರಿಗಳಲ್ಲೂ ನೌಕರರ ಹಾಜರಾತಿ ವಿರಳವಾಗಿತ್ತು ಎನ್ನಲಾಗಿದೆ.

 

 

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News