ಮಂಜೇಶ್ವರ: ಆರೋಗ್ಯ ಅಧಿಕಾರಿಯ ಮೃತದೇಹ ಶೌಚಾಲಯದಲ್ಲಿ ಪತ್ತೆ
Update: 2024-06-18 23:15 IST
ಮನೋಜ್
ಮಂಜೇಶ್ವರ: ಆರೋಗ್ಯ ಅಧಿಕಾರಿರೋರ್ವರು ವಾಸಸ್ಥಳದ ಶೌಚಾಲಯದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಮಂಗಳವಾರ ಸಂಜೆ ಬೆಳಕಿಗೆ ಬಂದಿದೆ.
ಪತ್ತನಂತ್ತಿಟ್ಟದ ಮನೋಜ್ (45) ಮೃತಪಟ್ಟವರು. ಅವರು ಮಂಜೇಶ್ವರ ಬ್ಲಾಕ್ ಪಂಚಾಯತ್ ಕುಟುಂಬ ಕಲ್ಯಾಣ ಕೇಂದ್ರದ ಆರೋಗ್ಯಾಧಿಕಾರಿಯಾಗಿದ್ದರು.
ಮನೋಜ್ ಅವರು ಮಂಜೇಶ್ವರ ಎಸ್ಐಟಿ ಶಾಲಾ ಸಮೀಪದ ವಸತಿ ಗೃಹದಲ್ಲಿ ವಾಸವಾಗಿದ್ದರು. ದುರ್ವಾಸನೆ ಬಂದ ಹಿನ್ನೆಲೆಯಲ್ಲಿ ಪರಿಸರ ವಾಸಿಗಳು ಗಮನಿಸಿದಾಗ ಮನೋಜ್ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಒಬ್ಬರು ಮಾತ್ರ ಈ ಕೊಠಡಿಯಲ್ಲಿದ್ದರು ಎಂದು ತಿಳಿದುಬಂದಿದೆ.
ಎರಡು ದಿನಗಳ ಹಿಂದೆ ಹೃದಯಾಘಾತದಿಂದ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಮಂಜೇಶ್ವರ ಠಾಣಾ ಪೊಲೀಸರು ಮಹಜರು ನಡೆಸಿದರು.
ಎರಡು ತಿಂಗಳ ಹಿಂದೆ ಮಂಜೇಶ್ವರದಲ್ಲಿ ಅರೋಗ್ಯ ಅಧಿಕಾರಿಯಾಗಿ ಮನೋಜ್ ಅವರು ಅಧಿಕಾರ ವಹಿಸಿಕೊಂಡಿದ್ದರು.