ಮಂಜೇಶ್ವರ: ವ್ಯಕ್ತಿಗೆ ಮಾರಕಾಸ್ತ್ರಗಳಿಂದ ಹಲ್ಲೆ
Update: 2025-02-11 23:18 IST
ಮಂಜೇಶ್ವರ : ಉಪ್ಪಳದಲ್ಲಿ ವ್ಯಕ್ತಿಯೋರ್ವನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ಗಂಭೀರ ಗಾಯಗೊಂಡ ವ್ಯಕ್ತಿಯನ್ನು ಪಯ್ಯನ್ನೂರಿನ ಸುರೇಶ್ ಎಂದು ಗುರುತಿಸಲಾಗಿದ್ದು, ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸುರೇಶ್ ಉಪ್ಪಳದ ಪ್ಲ್ಯಾಟ್ ವೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ರಾತ್ರಿ 10 ಗಂಟೆಯ ಸುಮಾರಿಗೆ ಓರ್ವ ಈ ಕೃತ್ಯ ನಡೆಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಮಂಜೇಶ್ವರ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.