×
Ad

ಬಂದ್ಯೋಡು: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Update: 2025-07-15 23:48 IST

ಬಂದ್ಯೋಡು: ಬಳಿಯ ಹಳೆ ಸರ್ವೀಸ್ ಕಟ್ಟಡದಲ್ಲಿ ಮಂಗಳವಾರ ಸಂಜೆ ಅಪರಿಚಿತ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾಗಿದೆ.

ಸುಮಾರು 50 ವರ್ಷ ಪ್ರಾಯ ಅಂದಾಜಿಸಲಾಗಿದ್ದು, ಮೂರು ದಿನಗಳ ಹಿಂದೆ ಮೃತಪಟ್ಟಿರ ಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

ಮೃತಪಟ್ಟವರು ಕರ್ನಾಟಕ ಮೂಲದ ನಿವಾಸಿ ಎಂದು ಶಂಕಿಸಲಾಗಿದೆ. ಸ್ಥಳೀಯರು ನೀಡಿದ ಮಾಹಿತಿ ಯಂತೆ ಕುಂಬಳೆ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಮಹಜರು ನಡೆಸಿದರು. ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ಕುಂಬಳೆ ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News