ಪೈವಳಿಕೆ: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ನಗ-ನಗದು ಕಳವು
Update: 2026-07-15 12:16 IST
ಕಾಸರಗೋಡು: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗ-ನಗದು ಕಳವುಗೈದ ಘಟನೆ ಪೈವಳಿಕೆ ಸಮೀಪದ ಕುರುಡಪದವು ಎಂಬಲ್ಲಿ ನಡೆದಿರುವುದು ವರದಿಯಾಗಿದೆ.
ಸುಬ್ರಾಯ ಸಾಯ ಎಂಬವರ ಮನೆಯಲ್ಲಿ ಈ ಕಳವು ನಡೆದಿದೆ. ಮನೆಯವರು ಹೊರಗಡೆ ತೆರಳಿದ್ದ ಸಂದ ರ್ಭ ಮನೆಗೆ ನುಗ್ಗಿದ ಕಳ್ಳರು 110 ಗ್ರಾಂ ಚಿನ್ನಾಭರಣ ಮತ್ತು 20 ಸಾವಿರ ರೂ. ನಗದು ಕಳವುಗೈದಿದ್ದಾರೆ. ಮನೆಯ ಹೊರಗಡೆ ಇಟ್ಟಿದ್ದ ಕೀಲಿ ಕೈ ಬಳಸಿ ಕೃತ್ಯ ನಡೆದಿದೆ ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.
ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.