×
Ad

ಉದುಮ: ತಾಯಿ-ಮಗುವಿನ ಮೃತದೇಹ ಬಾವಿಯಲ್ಲಿ ಪತ್ತೆ

Update: 2023-09-15 14:42 IST

ಕಾಸರಗೋಡು, ಸೆ.15: ತಾಯಿ ಮತ್ತು ಐದು ವರ್ಷದ ಮಗುವಿನ ಮೃತದೇಹಗಳು ಬಾವಿಯಲ್ಲಿ ಪತ್ತೆಯಾದ ಘಟನೆ ಶುಕ್ರವಾರ ಮಧ್ಯಾಹ್ನ ಉದುಮ ಸಮೀಪದ ಕಳ್ನಾಡ್ ನಿಂದ ವರದಿಯಾಗಿದೆ.

ಕಳ್ನಾಡ್ ಅರಮಂಗಾನ ನಿವಾಸಿ ತಾಜುದ್ದೀನ್ ಎಂಬವರ ಪತ್ನಿ ರುಬೀನಾ(33) ಮತ್ತು ಅವರ ಐದು ವರ್ಷದ ಪುತ್ರಿ ಹನಾನ್ ಮರಿಯ ಮೃತದೇಹಗಳು ಬಾವಿಯಲ್ಲಿ ಪತ್ತೆಯಾಗಿವೆ.

ಮಧ್ಯಾಹ್ನ 12 ಗಂಟೆಯಿಂದ ತಾಯಿ-ಮಗಳು ನಾಪತ್ತೆಯಾಗಿದ್ದರೆನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಹುಡುಕಾಟ ನಡೆಸಿದಾಗ ಮನೆ ಸಮೀಪದ ಬಾವಿಯಲ್ಲಿ ಇಬ್ಬರ ಮೃತದೇಹಗಳು ಪತ್ತೆಯಾಗಿವೆ. ಮಗುವನ್ನು ಬಾವಿಗೆ ತಳ್ಳಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಪೊಲೀಸರು ಸ್ಥಳಕ್ಕಾಗಮಿಸಿ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪರಿಸರವಾಸಿಗಳ ನೆರವಿನಿಂದ ಮೃತ ದೇಹವನ್ನು ಮೇಲಕ್ಕೆತ್ತಿದರು. ಮೃತದೇಹಗಳನ್ನು ಕಾಸರಗೋಡು ಜನರಲ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

ರುಬೀನಾರ ಪತಿ ತಾಜುದ್ದೀನ್ ಗಲ್ಫ್ ಉದ್ಯೋಗಿ ಎಂದು ತಿಳಿದುಬಂದಿದೆ.

ಕೃತ್ಯಕ್ಕೆ ಕಾರಣ ತಿಳಿದು ಬಂದಿಲ್ಲ. ಮೇಲ್ಪರಂಬ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News