ಮಡಿಕೇರಿ : ಜೀವನದಿ ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಶನಿವಾರ ರಾತ್ರಿ 7:50ಕ್ಕೆ ಭಕ್ತರ ಹರ್ಷೋದ್ಗಾರದ ನಡುವೆ ಪವಿತ್ರ ತೀರ್ಥೋದ್ಭವವಾಯಿತು.

ತೀರ್ಥೋದ್ಭವದ ಅಂಗವಾಗಿ ಮುಂಜಾನೆಯಿಂದಲೇ ತಲಕಾವೇರಿ ಹಾಗೂ ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ನೆರವೇರಿದವು.

ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ನರೇಂದ್ರ ಸ್ವಾಮಿ, ಶಾಸಕರಾದ ಎ.ಎಸ್.ಪೊನ್ನಣ್ಣ, ಡಾ.ಮಂತರ್ ಗೌಡ, ತಲಕಾವೇರಿ, ಭಾಗಮಂಡಲ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಬಿ.ಎನ್.ಪೃಥ್ಯು ಸೇರಿದಂತೆ ತಕ್ಕ ಮುಖ್ಯಸ್ಥರು, ಹಿರಿಯ ಅಧಿಕಾರಿಗಳು ಹಾಗೂ ಭಕ್ತರು ಉಪಸ್ಥಿತರಿದ್ದರು.

 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor