ಫೆಂಗಲ್ ಚಂಡಮಾರುತ | ಡಿ.3ರಂದು ಕೊಡಗು ಜಿಲ್ಲೆ ಶಾಲಾ, ಕಾಲೇಜು, ಅಂಗನವಾಡಿಗಳಿಗೆ ರಜೆ
Update: 2024-12-02 20:53 IST
ಸಾಂದರ್ಭಿಕ ಚಿತ್ರ
ಮಡಿಕೇರಿ : ಫೆಂಗಲ್ ಚಂಡಮಾರುತದ ಪರಿಣಾಮ ಕೊಡಗು ಜಿಲ್ಲೆಯಲ್ಲೂ ಉತ್ತಮ ಮಳೆಯಾಗುತ್ತಿದೆ. ಮುಂಜಾಗೃತಾ ಕ್ರಮವಾಗಿ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆ ಪದವಿ ಮತ್ತು ಸ್ನಾತಕೋತ್ತರ ಪದವಿ ಕಾಲೇಜುಗಳನ್ನು ಹೊರತು ಪಡಿಸಿ ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜು ಮತ್ತು ಅಂಗನವಾಡಿಗಳಿಗೆ ಡಿ.3ರಂದು ಒಂದು ದಿನ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶಿಸಿದೆ.