ಮಡಿಕೇರಿ | ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ
Update: 2024-04-18 19:29 IST
ಸಾಂದರ್ಭಿಕ ಚಿತ್ರ
ಮಡಿಕೇರಿ: ಹುಲಿ ದಾಳಿಯಿಂದ ಕಾರ್ಮಿಕನೋರ್ವ ಮೃತಪಟ್ಟ ಘಟನೆ ಪೊನ್ನಂಪೇಟೆ ತಾಲೂಕಿನ ನಿಟ್ಟೂರು ಜಾಗಲೆ ಗ್ರಾಮದಲ್ಲಿ ಗುರುವಾರ ವರದಿಯಾಗಿದೆ.
ಅಸ್ಸಾಂ ಮೂಲದ ಮುಝೀದ್ ರೆಹಮಾನ್ (55) ಹುಲಿ ದಾಳಿಯಿಂದ ಮೃತಪಟ್ಟ ಕಾರ್ಮಿಕ ಎಂದು ಗುರತಿಸಲಾಗಿದೆ.
ಮುಝೀದ್ ರೆಹಮಾನ್ ಅವರು ಎಂದಿನಂತೆ ಅವಿನಾಶ್ ಅವರಿಗೆ ಸೇರಿದ ದನಗಳನ್ನು ಗದ್ದೆಯಲ್ಲಿ ಮೇಯಿಸುತ್ತಿದ್ದಾಗ ಹುಲಿ ದಾಳಿ ನಡೆಸಿದೆ. ರೆಹಮಾನ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಪೊನ್ನಂಪೇಟೆ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.