×
Ad

Madikeri ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಇಮೇಲ್; ಪರಿಶೀಲನೆ

Update: 2026-02-16 12:33 IST

ಮಡಿಕೇರಿ : ಮಡಿಕೇರಿಯ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆಯ ಇ-ಮೇಲ್ ಬಂದಿದೆ. ಇಂದು ಮಧ್ಯಾಹ್ನ 12:30ಕ್ಕೆ ನ್ಯಾಯಾಲಯವನ್ನು ಸ್ಪೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ. ಇಮೇಲ್ ಗಮನಿಸಿದ ನ್ಯಾಯಾಲಯದ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ನ್ಯಾಯಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದವರು ನ್ಯಾಯಾಲಯದಿಂದ ಹೊರಬಂದಿದ್ದಾರೆ. ಬಾಂಬ್ ನಿಗ್ರಹದಳ ಪರಿಶೀಲನೆ ನಡೆಸುತ್ತಿದೆ. 

ಬಾಂಬ್ ಬೆದರಿಕೆ ಮೆಸೇಜ್: ನ್ಯಾಯಾಲಯ ಕಲಾಪ ಸ್ಥಗಿತ

ಮಂಡ್ಯ: ಹುಸಿ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಸೋಮವಾರ ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಆತಂಕ ಮೂಡಿದೆ.

ಬೆಳಗ್ಗೆ 11.30ಕ್ಕೆ ನ್ಯಾಯಾಧೀಶರ ಮೇಲ್ ಗೆ ಬಾಂಬ್ ಬೆದರಿಕೆ ಮೆಸೇಜ್ ಬಂದ ಹಿನ್ನೆಲೆಯಲ್ಲಿ ವಕೀಲರು, ಕಕ್ಷಿದಾರರು ನ್ಯಾಯಾಲಯದ ಕಲಾಪವನ್ನು ಸ್ಥಗಿತಗೊಳಿಸಿ ಹೊರಗೆ ಬಂದರು. ಮಾಹಿತಿ ತಿಳಿದ ಪೊಲೀಸರು, ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಬಾಂಬ್ ನಿಷ್ಕ್ರಿಯ ದಳದವರು ಪರಿಶೀಲನೆ ನಡೆಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News