ಮಡಿಕೇರಿ ಅರಣ್ಯ ಭವನದ ಬಳಿ ಶಿಶುವಿನ ಮೃತದೇಹ ಪತ್ತೆ
Update: 2025-11-13 15:57 IST
ಮಡಿಕೇರಿ ನ.13: ಮಡಿಕೇರಿ ಅರಣ್ಯ ಭವನದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದೆ.
ಶಿಶುವಿನ ಜನನವಾಗಿ ಎರಡು ವಾರಗಳಾಗಿದ್ದು, ಮೂರು ದಿನಗಳ ಹಿಂದೆ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ.
ಮೃತದೇಹ ಕೊಳೆತ ಸ್ಥಿತಿಯಲ್ಲಿದ್ದು, ಮಡಿಕೇರಿ ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ನಗರ ಠಾಣಾ ಪೊಲೀಸ್, ಶಿಶು ಕಲ್ಯಾಣ ಇಲಾಖೆ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.