ದಿನೇಶ್ ಕುಮಾರ್ ಮೀನಾ

ಮಡಿಕೇರಿ: ಕೊಡಗು ಜಿಲ್ಲಾ ಪಂಚಾಯತ್‌ನ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ದಿನೇಶ್ ಕುಮಾರ್ ಮೀನಾ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು.

ದಿನೇಶ್ ಕುಮಾರ್ ಮೀನಾ ಅವರು ಈ ಹಿಂದೆ ಕೊಳ್ಳೇಗಾಲ ಉಪವಿಭಾಗಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.

ಸರ್ಕಾರದ ಆದೇಶದಂತೆ ಈ ಹಿಂದಿನ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ ಅವರು ವಿಜಯಪುರ ಜಿಲ್ಲೆಗೆ ವರ್ಗಾವಣೆಯಾಗಿದ್ದರು. ಅವರ ಸ್ಥಾನಕ್ಕೆ ದಿನೇಶ್ ಕುಮಾರ್ ಮೀನಾ ಅವರನ್ನು ನೇಮಕ ಮಾಡಲಾಗಿದ್ದು, ಇದೀಗ ಅವರು ನೂತನ ಸಿಇಒ ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor