×
Ad

ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ ಆರೋಪ: ಗ್ರಾಮ ಪಂಚಾಯತಿ ಸದಸ್ಯನ ಬಂಧನ

Update: 2024-02-23 11:33 IST

ಮಡಿಕೇರಿ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಹೊದ್ದೂರು ಗ್ರಾಮ ಪಂಚಾಯತಿ ಪಕ್ಷೇತರ ಸದಸ್ಯನನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ಎಂ.ವೈ ಮಾಹಿನ್ ಎಂದು ಗುರುತಿಸಲಾಗಿದೆ. ದೂರು ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಆರೋಪಿ ಮಾಹಿನ್ ನನ್ನು ನಾಪೋಕ್ಲು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮಂಜುನಾಥ್ ನೇತೃತ್ವದ ತಂಡ ಮೈಸೂರು ಜಿಲ್ಲೆಯ ಹುಣಸೂರಿನಿಂದ ಬಂಧಿಸಿದೆ.

ಆರೋಪಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ  ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News