ಕೊಡಗು | ಹೃದಯಾಘಾತದಿಂದ 24 ವರ್ಷದ ಯುವತಿ ಮೃತ್ಯು
Update: 2024-06-27 13:54 IST
ಮಡಿಕೇರಿ : ಇತ್ತೀಚಿನ ದಿನಗಳಲ್ಲಿ ಕಿರಿಯ ವಯಸ್ಸಿನವರ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕೊಡಗು ಜಿಲ್ಲೆಯ ನೆಲಜಿ ಗ್ರಾಮದಲ್ಲಿ24 ವರ್ಷದ ಯುವತಿಯೊಬ್ಬಳು ಹೃದಯಾಘಾತದಿಂದ ಮೃತ ಪಟ್ಟಿರುವ ಘಟನೆ ವರದಿಯಾಗಿದೆ.
ಮಡಿಕೇರಿ ತಾಲ್ಲೂಕಿನ ನೆಲಜಿ ಗ್ರಾಮದ ಮಣವಟ್ಟಿರ ಪೊನ್ನಪ್ಪ ಎಂಬುವವರ ಪುತ್ರಿ ನಿಲಿಕಾ(24) ಮೃತ ಯುವತಿ ಎಂದು ಗುರುತಿಸಲಾಗಿದೆ. ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಉದ್ಯೋಗದಲ್ಲಿದ್ದ ನಿಲಿಕಾ ಗುರುವಾರ ಬೆಳಿಗ್ಗೆ ಕರ್ತವ್ಯಕ್ಕೆ ತೆರಳಲೆಂದು ಮನೆಯಲ್ಲಿ ತಯಾರಿ ನಡೆಸುತ್ತಿದ್ದರು ಎನ್ನಲಾಗಿದೆ. ಈ ಸಂದರ್ಭ ಹೃದಯಾಘಾತಕ್ಕೊಳಗಾಗಿ ಸ್ಥಳದಲ್ಲೇ ಮೃತಪಟ್ಟರು ಎಂದು ತಿಳಿದು ಬಂದಿದೆ.