Kodagu | ಬಸ್ ನಲ್ಲಿ ಪ್ರಯಾಣಿಸುತ್ತಿದ್ದಾಗ ಹೃದಯಾಘಾತ: ಶಿಕ್ಷಣಾಧಿಕಾರಿ ಮೃತ್ಯು

Update: 2026-08-07 20:44 IST

ಆನಂದ್ ಪಿ.ಜೆ.

ಮಡಿಕೇರಿ: ಕರ್ತವ್ಯಕ್ಕೆಂದು ಬರುತ್ತಿದ್ದ ವಿರಾಜಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಆನಂದ್ ಪಿ.ಜೆ. (55) ಅವರು ಬಸ್ ನಲ್ಲೇ ಹೃದಯಾಘಾತವಾಗಿ ನಿಧನ ಹೊಂದಿದ್ದಾರೆ.

ಶುಕ್ರವಾರ ಬೆಳಿಗ್ಗೆ ಮೈಸೂರಿನಿಂದ ವಿರಾಜಪೇಟೆಗೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಆನಂದ್ ಅವರಿಗೆ ಇಲವಾಲ ಸಮೀಪ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತ್ತಾದರೂ ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ.

ಆನಂದ್ ಅವರು ಕಳೆದ ಒಂದೂವರೆ ವರ್ಷದಿಂದ ವಿರಾಜಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News