×
Ad

Kodagu | ಕಾಡುಕೋಣಕ್ಕೆ ಢಿಕ್ಕಿಯಾಗಿ ಗೂಡ್ಸ್ ಆಟೋ ಪಲ್ಟಿ : ಇಬ್ಬರಿಗೆ ಗಾಯ

ಗಾಯಗೊಂಡ ಕಾಡುಕೋಣಕ್ಕೆ ವನ್ಯ ಜೀವಿ ಸಂರಕ್ಷಣಾ ಕೇಂದ್ರದಲ್ಲಿ ಚಿಕಿತ್ಸೆ

Update: 2026-02-20 19:49 IST

ಗಾಯಗೊಂಡ ಕಾಡುಕೋಣ

ಮಡಿಕೇರಿ : ಕಾಫಿ ತೋಟದಿಂದ ಏಕಾಏಕಿ ರಸ್ತೆಗೆ ಬಂದ ಕಾಡುಕೋಣಕ್ಕೆ ಢಿಕ್ಕಿಯಾದ ಪರಿಣಾಮ ಗೂಡ್ಸ್ ಆಟೋ ಪಲ್ಟಿಯಾದ ಘಟನೆ ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ಇಂದು ನಡೆದಿದೆ.

ಘಟನೆಯಲ್ಲಿ ಚಾಲಕ ಹಾಗೂ ಕಾರ್ಮಿಕ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾಡುಕೋಣಕ್ಕೂ ಗಾಯಗಳಾಗಿದ್ದು, ಚಿಕಿತ್ಸೆಗೆಂದು ಆನೆಚೌಕೂರು ವನ್ಯ ಜೀವಿ ಸಂರಕ್ಷಣಾ ಕೇಂದ್ರದಲ್ಲಿ ದಾಖಲಿಸಲಾಗಿದೆ.

ಸ್ಥಳಕ್ಕೆ ವಿರಾಜಪೇಟೆ ವಲಯ ಅರಣ್ಯ ಸಂರಕ್ಷಣಾಧಿಕಾರಿ ಶಿವರಾಂ, ಉಪವಲಯ ಅರಣ್ಯಾಧಿಕಾರಿ ಸಂಜಿತ್ ಸೋಮಯ್ಯ, ತಿತಿಮತಿ ವಲಯ ಅರಣ್ಯ ಸಂರಕ್ಷಣಾಧಿಕಾರಿ ಗಂಗಾಧರ್, ಆನೆ ಚೌಕೂರು ವಲಯ ಅರಣ್ಯ ಸಂರಕ್ಷಣಾಧಿಕಾರಿ ದೇವರಾಜ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.  

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News