×
Ad

KODAGU | ಎಸ್ ಡಿಪಿಐ ರಾಜ್ಯಾಧ್ಯಕ್ಷ ಪ್ರಯಾಣಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ: ಅಪಾಯದಿಂದ ಪಾರು

Update: 2026-02-08 12:28 IST

ಕೊಡಗು: ಎಸ್ ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಪ್ರಯಾಣಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಕಾಣಿಸಿಕೊಂಡ ಘಟನೆ ರವಿವಾರ ಮುಂಜಾನೆ ಕುಶಾಲನಗರ ತಾಲೂಕಿನ ಆನೆಕಾಡು ಬಳಿ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಸಂಭವಿಸಿದೆ.

ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿರುವುದು ಅರಿವಿಗೆ ಬರುತ್ತಿದ್ದಂತೆ ಅಬ್ದುಲ್ ಮಜೀದ್ ಹಾಗೂ ಕಾರು ಚಾಲಕ ಕಾರಿನಿಂದ ಇಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕ್ಷಣಾರ್ಧದಲ್ಲಿ ಬೆಂಕಿಯಿಂದ ಇಡೀ ಕಾರು ಭಸ್ಮವಾಗಿದೆ.

ಮಾಹಿತಿ ಪಡೆದ ಕುಶಾಲನಗರ ಅಗ್ನಿಶಾಮಕ ದಳ, ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಯಿತು.

ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ ತಿಳಿದಿಲ್ಲ.

ಕಾರು ಸಂಪೂರ್ಣ ಹಾನಿಗೀಡಾಗಿದೆ.


 



Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News