×
Ad

Kodagu | ಕಾಡಾನೆ ದಾಳಿಗೆ ಮಹಿಳೆ ಬಲಿ

Update: 2026-06-05 14:52 IST

ಸಾಂದರ್ಭಿಕ ಚಿತ್ರ | PC : Gemini AI

ಮಡಿಕೇರಿ : ಕಾಡಾನೆ ದಾಳಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ತಿತಿಮತಿ ಸಮೀಪದ ಕೋಣನಕಟ್ಟೆ ಗ್ರಾಮದ ಕಾಫಿ ತೋಟವೊಂದರಲ್ಲಿ ನಡೆದಿದೆ.

ಐಜಿಪಿ ಅಣ್ಣಳಮಾಡ ಸುನಿಲ್ ಅಚ್ಚಯ್ಯ ಅವರ ಪತ್ನಿ ಸಂಧ್ಯಾ (51) ಎಂಬುವವರೇ ಮೃತ ಮಹಿಳೆ. ಇಂದು ಬೆಳಿಗ್ಗೆ ಕೋಣನಕಟ್ಟೆಯಲ್ಲಿರುವ ಕಾಫಿ ತೋಟವನ್ನು ವೀಕ್ಷಿಸುತ್ತಿದ್ದ ಸಂದರ್ಭ ಕಾಡಾನೆ ಏಕಾಏಕಿ ದಾಳಿ ಮಾಡಿದೆ ಎನ್ನಲಾಗಿದೆ. ತೀವ್ರವಾಗಿ ಗಾಯಗೊಂಡ ಸಂಧ್ಯಾ ಅವರನ್ನು ಗೋಣಿಕೊಪ್ಪಲು ಆಸ್ಪತ್ರೆಗೆ ಕರೆ ತರುವ ಸಂದರ್ಭ ಮಾರ್ಗ ಮಧ್ಯೆ ಮೃತಪಟ್ಟರು ಎಂದು ತಿಳಿದು ಬಂದಿದೆ.

ಕಾಡಾನೆ ದಾಳಿ ಸಂದರ್ಭ ತೋಟದಲ್ಲಿದ್ದ ಕೆಲವು ಕಾರ್ಮಿಕರು ಓಡಿ ಹೋಗಿ ಜೀವ ಉಳಿಸಿಕೊಂಡಿದ್ದಾರೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಕಾಡಾನೆಗಳ ಉಪಟಳ ಮಿತಿ ಮೀರಿರುವ ಕುರಿತು ಸ್ಥಳೀಯ ಗ್ರಾಮಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News