ಕುಶಾಲನಗರ | ಮಾದಕ ವಸ್ತು ಎಂಡಿಎಂಎ ಮಾರಾಟ ಯತ್ನ : ಇಬ್ಬರ ಬಂಧನ
ಬಂಧಿತ ಆರೋಪಿಗಳು
ಕುಶಾಲನಗರ : ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಾಲು ಸಹಿತ ಬಂಧಿಸುವಲ್ಲಿ ಕುಶಾಲನಗರ ಪೊಲೀಸರು ಯಶ್ವಿಯಾಗಿದ್ದಾರೆ.
ಕುಶಾಲನಗರದ ಮದಲಾಪುರ ಗ್ರಾಮದ ನಿವಾಸಿ ಅಝರುದ್ದೀನ್ (29) ಹಾಗೂ ಗುಮ್ಮನಕೊಲ್ಲಿ ನಿವಾಸಿ ಮುಹಮ್ಮದ್ ಮುಸ್ತಾಕ್ (29) ಬಂಧಿತ ಆರೋಪಿಗಳು. ಬಂಧಿತರ ಬಳಿಯಿಂದ 13 ಗ್ರಾಂ ಮಾದಕ ವಸ್ತು ಎಂಡಿಎಂಎ, ಒಂದು ದ್ವಿಚಕ್ರ ವಾಹನ ಮತ್ತು 3 ಮೊಬೈಲ್ ಫೋನ್ ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ಕುಶಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗುಮ್ಮನಕೊಲ್ಲಿಯಲ್ಲಿ ಮಾದಕ ವಸ್ತು ಎಂಡಿಎಂಎಯನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ್ದರು.
ಸೋಮವಾರಪೇಟೆ ಡಿವೈಎಸ್‍ಪಿ ಗಂಗಾಧರಪ್ಪ ಆರ್.ವಿ, ಕುಶಾಲನಗರ ಸಿಪಿಐ ರಾಜೇಶ್ ಕೆ., ಪಿಎಸ್‍ಐ ಗೀತಾ ಹಾಗೂ ಸಿಬ್ಬಂದಿಗಳ ತನಿಖಾ ತಂಡ ಕಾರ್ಯಾಚರಣೆ ನಡೆಸಿತು.
ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯದಕ್ಷತೆ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ನಿಷೇಧಿತ ಮಾದಕ ವಸ್ತುಗಳನ್ನು ಬಳಸುವ, ಸರಬರಾಜು ಅಥವಾ ಮಾರಾಟ ಮಾಡುವ ವ್ಯಕ್ತಿಗಳು ಕಂಡುಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆ ಹಾಗೂ ಕೆ.ಎಸ್.ಪಿ ತಂತ್ರಾಶದ ಮೂಲಕ ಮಾಹಿತಿ ನೀಡುವಂತೆ ಎಸ್‍ಪಿ ಮನವಿ ಮಾಡಿದ್ದಾರೆ. ಮಾದಕ ಚಟುವಟಿಕೆಗಳ ಕುರಿತು ಮಾಹಿತಿ ಒದಗಿಸುವವರ ವಿವರಗಳನ್ನು ಗುಪ್ತವಾಗಿ ಇಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.