ಮಡಿಕೇರಿ : ಈಜಲು ತೆರಳಿದ್ದ ಯುವಕನೋರ್ವ ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಕುಶಾಲನಗರ ತಾಲ್ಲೂಕಿನ ಹೇರೂರು ಗ್ರಾಮದಲ್ಲಿ ನಡೆದಿದೆ.

ಮೃತ ಯುವಕನನ್ನು ಸುಂಟಿಕೊಪ್ಪ ಸಮೀಪದ ಹೊಸಕೋಟೆಯ ನಿವಾಸಿ ರಜಾಕ್ ಎಂಬುವವರ ಪುತ್ರ ರಮೀಜ್ (21) ಎಂದು ಗುರುತಿಸಲಾಗಿದೆ.

ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ರಮೀಜ್ ರಜೆಯಲ್ಲಿ ಮನೆಗೆ ಬಂದಿದ್ದು, ಐವರು ಸ್ನೇಹಿತರೊಂದಿಗೆ ಬುಧವಾರ ಹಾರಂಗಿ ಹಿನ್ನೀರಿನ ಪ್ರದೇಶಕ್ಕೆ ಈಜಲು ತೆರಳಿದ್ದರು ಎನ್ನಲಾಗಿದೆ.

ಮುಳುಗು ತಜ್ಞರಾದ ಈಶ್ವರ್ ಮಲ್ಪೆ ತಂಡ ಹಾಗೂ ಪೊಲೀಸರು ಗುರುವಾರ ಕಾರ್ಯಾಚರಣೆ ನಡೆಸಿ ಯುವಕನ ಮೃತದೇಹವನ್ನು ನೀರಿನಿಂದ ಹೊರತೆಗೆದಿದ್ದಾರೆ.

ಸುಂಟಿಕೊಪ್ಪ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor