×
Ad

ಮಡಿಕೇರಿ : ಚೇಲಾವರ ಫಾಲ್ಸ್ ವೀಕ್ಷಿಸಲು ಬಂದಿದ್ದ ಪ್ರವಾಸಿ ಯುವಕ ನೀರು ಪಾಲು

Update: 2024-02-04 19:25 IST

ಮಡಿಕೇರಿ: ಪ್ರವಾಸಕ್ಕೆಂದು ಬಂದಿದ್ದ ಯುವಕನೊಬ್ಬ ನೀರುಪಾಲಾದ ಘಟನೆ ಚೆಯ್ಯಂಡಾಣೆ ಸಮೀಪದ ಚೇಲಾವರ ಫಾಲ್ಸ್ ನಲ್ಲಿ ಭಾನುವಾರ ನಡೆದಿದೆ.

ಮೃತನನ್ನು ಕೇರಳದ ಮಟ್ಟನ್ನೂರು ನಿವಾಸಿ  ರಾಶೀದ್ (25) ಎಂದು ಗುರುತಿಸಲಾಗಿದೆ. ತನ್ನ ಮೂವರು ಸ್ನೇಹಿತರೊಂದಿಗೆ ಕೊಡಗಿನ ಪ್ರವಾಸಿತಾಣಗಳ ವೀಕ್ಷಣೆಗೆ ಬಂದಿದ್ದ ರಾಶೀದ್, ಚೇಲಾವರ ಜಲಪಾತದಲ್ಲಿ ಸ್ನಾನಕ್ಕೆಂದು ಇಳಿದಾಗ ನೀರಿನಲ್ಲಿ ಮುಳುಗಿ ಸಾವಿಗೀಡಾಗಿರುವುದಾಗಿ ಹೇಳಲಾಗಿದೆ.

ಜಲಪಾತದಿಂದ ಮೃತದೇಹವನ್ನು ಮೇಲೆತ್ತುವಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಯಶಸ್ವಿಯಾಗಿದ್ದು, ನಾಪೋಕ್ಲು ಪೊಲೀಸ್ ಠಾಣೆಯ ಅಪರಾಧ ವಿಭಾಗದ ಠಾಣಾಧಿಕಾರಿ ಶ್ರೀಧರ್ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆಗೆ ಸಂಬಂಧಿಸಿದಂತೆ ನಾಪೋಕ್ಲು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News