ಮಡಿಕೇರಿ | ಮಾರಕಾಸ್ತ್ರ ಪ್ರದರ್ಶಿಸುತ್ತಾ ಬೈಕ್ ಸವಾರಿ: ಇಬ್ಬರ ಬಂಧನ, ಓರ್ವ ಪರಾರಿ
Update: 2025-09-17 13:46 IST
ಮಡಿಕೇರಿ, ಸೆ.17: ಬೈಕಿನಲ್ಲಿ ತ್ರಿಬಲ್ ರೈಡಿಂಗ್ ಮಾಡುತ್ತಾ ಮಾರಕಾಸ್ತ್ರ ಪ್ರದರ್ಶನದ ವೀಡಿಯೊ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ ಆರೋಪದಲ್ಲಿ ಇಬ್ಬರನ್ನು ಕುಶಾಲನಗರ ಗ್ರಾಮಾಂತರ ಪೊಲೀಸರು ಬಂಧಿಸಿದ್ದು, ಓರ್ವ ತಲೆಮರೆಸಿಕೊಂಡಿದ್ದಾನೆ.
ಮರೂರು ಗ್ರಾಮದ ಸೂರ್ಯ ಮತ್ತು ಚಿಕ್ಕ ಅಳುವಾರದ ಪುನೀತ್ ಬಂಧಿತ ಆರೋಪಿಗಳು. ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಇನ್ನೋರ್ವ ಆರೋಪಿ ಹೆಬ್ಬಾಲೆಯ ಶ್ರೀಧರ ಎಂಬಾತ ತಲೆಮರೆಸಿಕೊಂಡಿದ್ದು, ಆತನಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
ಈ ಮೂವರು ಯುವಕರು ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಾ ತಲವಾರು ಝಳಪಿಸುತ್ತಿರುವ ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದರು.
ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಮೂವರ ವಿರುದ್ಧ ಪ್ರಕರಣ ದಾಖಲಿಸಿದ್ದರು.