×
Ad

ಮಡಿಕೇರಿ | ದ್ವಿಚಕ್ರ ವಾಹನಕ್ಕೆ ಬಸ್‌ ಢಿಕ್ಕಿ : ಸವಾರ ಮೃತ್ಯು

Update: 2024-06-16 19:06 IST

ಮಡಿಕೇರಿ : ಖಾಸಗಿ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸುಂಟಿಕೊಪ್ಪ ಸಮೀಪದ ಗದ್ದೆಹಳ್ಳದಲ್ಲಿ ರವಿವಾರ ನಡೆದಿದೆ.

ಮೃತರನ್ನು ಗದ್ದೆಹಳ್ಳದ ಪಟ್ಟೆಮನೆ ನಿವಾಸಿ ಲೋಕೇಶ್ (60) ಎಂದು ಗುರುತಿಸಲಾಗಿದೆ. ಸುಂಟಿಕೊಪ್ಪದಿಂದ ಗದ್ದೆಹಳ್ಳದ ಕಡೆಗೆ ತಮ್ಮ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಖಾಸಗಿ ಬಸ್ ವೊಂದು ಹಿಂಬದಿಯಿಂದ ಡಿಕ್ಕಿಯಾಗಿದೆ ಎಂದು ಹೇಳಲಾಗಿದೆ. ಅಪಘಾತದಿಂದ ಲೋಕೇಶ್ ಅವರು ದ್ವಿಚಕ್ರ ವಾಹನ ಸಹಿತ ರಸ್ತೆಗೆ ಬಿದ್ದ ಸಂದರ್ಭ ತಲೆಗೆ ತೀವ್ರ ಪೆಟ್ಟಾಗಿ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಸ್ಥಳಕ್ಕಾಗಮಿಸಿದ ಸುಂಟಿಕೊಪ್ಪ ಪೊಲೀಸರು ಖಾಸಗಿ ಬಸ್ ಹಾಗೂ ಚಾಲಕನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಗದ್ದೆಹಳ್ಳ ಭಾಗದ ಹೆದ್ದಾರಿ ತಿರುವಿನಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸಂಬಂಧಿಸಿದ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News