×
Ad

ಮಡಿಕೇರಿ: ಮೊಬೈಲ್ ಪತ್ತೆ ಹಚ್ಚಿದ ಸೈಬರ್ ಅಪರಾಧ ಠಾಣೆ ಪೊಲೀಸರು

Update: 2024-05-18 14:56 IST

ಮಡಿಕೇರಿ ಮೇ 18 : ಆಟೋರಿಕ್ಷಾದಲ್ಲಿ ಕಳೆದು ಹೋಗಿದ್ದ ಮೊಬೈಲ್ ಫೋನ್ ಅನ್ನು ಕೊಡಗು ಸೈಬರ್ ಅಪರಾಧ ಠಾಣೆ ಪೊಲೀಸರು ಪತ್ತೆ ಹಚ್ಚಿದ್ದಾರೆ.

ಎರಡು ತಿಂಗಳ ಹಿಂದೆ ಮಡಿಕೇರಿ ಮಾರುಕಟ್ಟೆ ವ್ಯಾಪಾರಿ ಎಂ.ಎ.ರಝಾಕ್ ಅವರು ರಾಜರಾಜೇಶ್ವರಿ ನಗರದ ರಸ್ತೆಯಲ್ಲಿ ಆಟೋರಿಕ್ಷಾವೊಂದರಲ್ಲಿ ಮೊಬೈಲ್ ಫೋನ್ ಕಳೆದುಕೊಂಡಿದ್ದರು. ಈ ಬಗ್ಗೆ ಸೈಬರ್ ಅಪರಾಧ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಎರಡು ತಿಂಗಳ ತನಿಖೆಯ ನಂತರ ಮೊಬೈಲ್ ಫೋನ್ ಪತ್ತೆಯಾಗಿದ್ದು, ಠಾಣಾಧಿಕಾರಿ ಶ್ರೀಕಾಂತ್ ಅವರು ಇಂದು ಎಂ.ಎ.ರಝಾಕ್ ಅವರಿಗೆ ಹಸ್ತಾಂತರಿಸಿದರು.

ಪೊಲೀಸರ ಕಾರ್ಯದಕ್ಷತೆಯ ಬಗ್ಗೆ ರಝಾಕ್ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಸೈಬರ್ ಅಪರಾಧ ಠಾಣೆಯ ಸೇವೆಯನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News