×
Ad

ಮಡಿಕೇರಿ | ಮಾದಕ ವಸ್ತು ಮಾರಾಟ: ಇಬ್ಬರು ಆರೋಪಿಗಳ ಬಂಧನ

Update: 2023-09-08 15:00 IST

ಮಡಿಕೇರಿ ಸೆ.7: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಬಂಧಿಸಿರುವ ಕೊಡಗು ಜಿಲ್ಲಾ ಪೊಲೀಸರು, ಆರೋಪಿಗಳಿಂದ 157 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ಮೊಣ್ಣಂಗೇರಿ ಗ್ರಾಮದ ಎಂ.ಸಚಿನ್(24) ಹಾಗೂ ಮಡಿಕೇರಿ ಇಂದಿರಾ ನಗರದ ಎಚ್.ಎ.ಲೋಕೇಶ್ (22) ಬಂಧಿತ ಆರೋಪಿಗಳು. ಮಡಿಕೇರಿ ಹೊಸ ಖಾಸಗಿ ಬಸ್ ನಿಲ್ದಾಣದಲ್ಲಿ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿರುವ ಖಚಿತ ಮಾಹಿತಿಯನ್ನು ಆಧರಿಸಿ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.

ವಿರಾಜಪೇಟೆ ಉಪ ವಿಭಾಗದ ಡಿವೈಎಸ್ಪಿ ಆರ್.ಮೋಹನ್ ಕುಮಾರ್, ಮಡಿಕೇರಿ ನಗರ ವೃತ್ತದ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ, ಮಡಿಕೇರಿ ನಗರ ಠಾಣೆಯ ಎಸ್ಸೈಗಳಾದ ಶ್ರೀನಿವಾಸ್ ಮತ್ತು ರಾಧಾ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಪ್ರಕರಣದಲ್ಲಿ ಕಾರ್ಯನಿರ್ವಹಿಸಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಕಾರ್ಯಕ್ಷಮತೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಶ್ಲಾಘಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News