×
Ad

ಮಡಿಕೇರಿ | ಕೋಯನಾಡಿನಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಮೃತ್ಯು

Update: 2025-07-25 15:02 IST

ಮಡಿಕೇರಿ: ಲಾರಿ ಮತ್ತು ಕಾರೊಂದರ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟ ಘಟನೆ ಮಾಣಿ – ಮೈಸೂರು ರಾ.ಹೆದ್ದಾರಿಯ ಸಂಪಾಜೆ ಸಮೀಪದ ಕೊಯನಾಡಿನಲ್ಲಿ ಇಂದು ಮಧ್ಯಾಹ್ನ ಸಂಭವಿಸಿದೆ.

 

ಕಾರಿನಲ್ಲಿದ್ದ ನಿಹಾದ್, ರಿಝ್ವಾನ್, ರಾಖಿಬ್ ಮತ್ತು ರಿಶು ಎಂಬವರು ಮೃತಪಟ್ಟಿದ್ದಾರೆ. . ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಳಿದ ಇಬ್ಬರು ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಗೊಣಿಕೊಪ್ಪ ಮತ್ತು ಹುಣಸೂರಿನ ನಾಲ್ವರು ಯುವಕರು ದ.ಕ. ಜಿಲ್ಲೆಯ ಉಳ್ಳಾಲಕ್ಕೆ ಗುರುವಾರ ಕಾರಿನಲ್ಲಿ ತೆರಳಿದ್ದವರು ಅಲ್ಲಿಂದ ಇಂದು ವಾಪಸ್ಸಾಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ಕಾರಿಗೆ ಮಡಿಕೇರಿ ಕಡೆಯಿಂದ ಸುಳ್ಯದತ್ತ ಬರುತ್ತಿದ್ದ ಲಾರಿ ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ

ಕೊಡಗು ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಮಾಹಿತಿ ಪಡೆಯುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News