×
Ad

ಮಡಿಕೇರಿ: ಬಾಲಕಿಯನ್ನು ಹತ್ಯೆಗೈದು ರುಂಡದೊಂದಿಗೆ ಪರಾರಿಯಾಗಿದ್ದ ಆರೋಪಿ ಪ್ರಕಾಶ್ ಸೆರೆ

Update: 2024-05-11 12:58 IST

ಮಡಿಕೇರಿ, ಮೇ 11: ಸೋಮವಾರಪೇಟೆ ತಾಲ್ಲೂಕಿನ ಸೂರ್ಲಬ್ಬಿ ಪ್ರೌಢಶಾಲೆಯ ವಿದ್ಯಾರ್ಥಿನಿ ಮೀನಾ(16) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರಕಾಶ್ (32)ನನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ ಬಾಲಕಿಯ ರುಂಡ ಪತ್ತೆಯಾಗಿಲ್ಲ.

ಆತನ ಸ್ವಗ್ರಾಮ ಹಮ್ಮಿಯಾಲದಲ್ಲೇ ಪೊಲೀಸರು ಆತನನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಗುರುವಾರ ಸಂಜೆ ಮೀನಾಳ ತಂದೆ, ತಾಯಿ ಮೇಲೆ ಹಲ್ಲೆ ಮಾಡಿ, ನಂತರ ಮೀನಾಳನ್ನು ಸ್ವಲ್ಪ ದೂರ ಎಳೆದೊಯ್ದು ಹತ್ಯೆಗೈದು ರುಂಡದೊಂದಿಗೆ ಆರೋಪಿ ಪರಾರಿಯಾಗಿದ್ದ.

ಪೊಲೀಸರು ಆರೋಪಿಯ ಶೋಧ ಕಾರ್ಯ ತೀವ್ರಗೊಳಿಸಿದ ಹಂತದಲ್ಲೇ ಶುಕ್ರವಾರ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವ್ಯಾಪಕ ಊಹಾಪೋಹಗಳು ಹಬ್ಬಿತ್ತು. ಆದರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಈ ವದಂತಿಯನ್ನು ಅಲ್ಲಗಳೆದಿದ್ದರು.

ಇದೀಗ ಆರೋಪಿಯ ಬಂಧನವಾಗಿದ್ದು, ತನಿಖೆ ಚುರುಕುಗೊಳಿಸಲಾಗಿದೆ ಎಂದು ಎಸ್ಪಿ, ಇಂದು ಬೆಳಗ್ಗೆ ಮಾಹಿತಿ ನೀಡಿದ್ದಾರೆ. ವಿಚಾರಣೆ ಮುಂದುವರೆದಿದ್ದು, ಹೆಚ್ಚಿನ ಮಾಹಿತಿಯನ್ನು ಮಧ್ಯಾಹ್ನದ ವೇಳೆ ನೀಡುವುದಾಗಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News