ಮಡಿಕೇರಿ : ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬಲಿ
Update: 2026-03-01 09:42 IST
ಮಡಿಕೇರಿ ಮಾ.1: ಕಾಡಾನೆ ದಾಳಿಗೆ ಸಿಲುಕಿ ಪಿಯುಸಿ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ಮಡಿಕೇರಿ ತಾಲ್ಲೂಕಿನ ಬೆಟ್ಟತ್ತೂರು ಗ್ರಾಮದಲ್ಲಿ ನಡೆದಿದೆ.
ಕುಡಿಯರ ಗಿರೀಶ್ ಎಂಬುವವರ ಪುತ್ರಿ ಪೂಜಾ (17) ಮೃತ ವಿದ್ಯಾರ್ಥಿನಿ. ಮಡಿಕೇರಿಯ ಸಂತ ಮೈಕಲರ ಪದವಿಪೂರ್ವ ಕಾಲೇಜಿನ ಪಿಯುಸಿ ವಿದ್ಯಾರ್ಥಿನಿಯಾಗಿದ್ದ ಈಕೆ, ಶನಿವಾರ ಸಂಜೆ ಮನೆಗೆ ತೆರಳುತ್ತಿದ್ದ ಸಂದರ್ಭ ಏಕಾಏಕಿ ಕಾಡಾನೆ ದಾಳಿ ಮಾಡಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.
ಕಾಡಾನೆ ದಾಳಿ ಕುರಿತು ಗ್ರಾಮಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.