×
Ad

ಮಡಿಕೇರಿ | ಗುಡ್ಡ ಕುಸಿಯುವ ಭೀತಿ : ಸಂಪಾಜೆ ರಸ್ತೆಯಲ್ಲಿ ರಾತ್ರಿ ವಾಹನಗಳ ಸಂಚಾರ ನಿಷೇಧ

Update: 2024-07-18 20:39 IST

ಸಂಪಾಜೆ ರಸ್ತೆ

ಮಡಿಕೇರಿ : ರಾಷ್ಟ್ರೀಯ ಹೆದ್ದಾರಿ 275ರ ಸಂಪಾಜೆಯಿಂದ ಮಡಿಕೇರಿ ನಡುವಿನ ಕರ್ತೋಜಿ ಭಾಗದಲ್ಲಿ ರಸ್ತೆಯ ಬಲಬದಿ ಗುಡ್ಡ ಕುಸಿಯುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರ ಹಿತದೃಷ್ಠಿಯಿಂದ ಜು.18 ರಿಂದ 22ರ ವರೆಗೆ ಪ್ರತಿ ದಿನ ರಾತ್ರಿ 8 ಗಂಟೆಯಿಂದ ಮರುದಿನ ಬೆಳಗ್ಗೆ 6 ಗಂಟೆಯವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ - 275ರ ಸಂಪಾಜೆಯಿಂದ ಮಡಿಕೇರಿ ನಡುವಿನ ಕರ್ತೋಜಿ ಬಳಿ ತೀವ್ರ ಮಳೆಯಿಂದಾಗಿ ರಸ್ತೆಯ ಬಲಬದಿ ಗುಡ್ಡ ಕುಸಿಯುವ ಸಾಧ್ಯತೆ ಇದೆ ಎಂದು ರಾಷ್ಟ್ರೀಯ ಹೆದ್ದಾರಿ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಜಿಲ್ಲಾಡಳಿತಕ್ಕೆ ನೀಡಿರುವ ವರದಿ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ತುರ್ತು ಸೇವೆಗಳ ಮತ್ತು ಪ್ರಕೃತಿ ವಿಕೋಪ ಸಂಬಂಧಿತ ಕಾರ್ಯದ ನಿಮಿತ್ತ ಕಾರ್ಯನಿರ್ವಹಿಸುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಂಚರಿಸುವ ವಾಹನಗಳನ್ನು ಹೊರತುಪಡಿಸಿ, ಉಳಿದಂತೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.

ಕೊಡಗು ಜಿಲ್ಲೆಯ ಮೂಲಕ ಮೈಸೂರು, ಬೆಂಗಳೂರು ಮೊದಲಾದ ಸ್ಥಳಗಳಿಗೆ ಸಂಚರಿಸುವ ವಾಹನಗಳು ಬದಲಿ ರಸ್ತೆಯಾದ ಚಾರ್ಮಾಡಿ ಘಾಟ್ - ಕೊಟ್ಟಿಗೆಹಾರ ಮಾರ್ಗವನ್ನು ಬಳಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News