ಮಡಿಕೇರಿ: ಕಾಡಾನೆ ದಾಳಿಗೆ ವ್ಯಕ್ತಿ ಬಲಿ
Update: 2024-10-15 22:22 IST
ಸಾಂದರ್ಭಿಕ ಚಿತ್ರ
ಮಡಿಕೇರಿ: ಕಾಡಾನೆ ದಾಳಿಗೆ ಸಿಲುಕಿ ವ್ಯಕ್ತಿಯೋರ್ವರು ಸಾವನ್ನಪ್ಪಿರುವ ಘಟನೆ ಭಾಗಮಂಡಲದಲ್ಲಿ ನಡೆದಿದೆ.
ಚೇರಂಗಾಲ ನಿವಾಸಿ ಮತ್ತಾರಿಮನೆ ಕರುಣಾಕರ(34) ಎಂಬವರು ಮೃತಪಟ್ಟವರು. ಕರುಣಾಕರ ಹಾಗೂ ಮತ್ತಿಬ್ಬರು ಚೇರಂಗಾಲದಿಂದ ಸುಮಾರು 1.5 ಕಿ.ಮೀ ದೂರದ ಪ್ರದೇಶದಲ್ಲಿ ತೆರಳುತ್ತಿದ್ದಾಗ ಕಾಡಾನೆ ದಾಳಿ ಮಾಡಿದೆ. ಇಬ್ಬರು ಕಾಡಾನೆಯಿಂದ ತಪ್ಪಿಸಿಕೊಂಡಿದ್ದಾರೆ, ಆದರೆ ಕರುಣಾಕರ ದಾಳಿಗೆ ಸಿಲುಕಿ ಮೃತಪಟ್ಟಿದ್ದಾರೆ.
ಅರಣ್ಯಾಧಿಕಾರಿಗಳು ಹಾಗೂ ಭಾಗಮಂಡಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಘಟನೆ ಕುರಿತು ಭಾಗಮಂಡಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.