×
Ad

ಕುಶಾಲನಗರ | ಸ್ಮಶಾನ ಜಾಗದಲ್ಲಿ ಗಾಂಜಾ ಬೆಳೆಸಿದ್ದ ಆರೋಪಿಯ ಬಂಧನ

Update: 2025-03-17 18:00 IST

ಕುಶಾಲನಗರ : ಸ್ಮಶಾನದ ಜಾಗದಲ್ಲಿ ಗಾಂಜಾ ಬೆಳೆಸಿದ್ದ ಆರೋಪಿಯನ್ನು ಕುಶಾಲನಗರ ಪೊಲೀಸರು ಬಂಧಿಸಿದ್ದಾರೆ. 1 ಕೆ.ಜಿ 730 ಗ್ರಾಂ ತೂಕದ 19 ಹಸಿ ಗಾಂಜಾ ಗಿಡಗಳೊಂದಿಗೆ ಹೇರೂರು ಗ್ರಾಮದ ನಿವಾಸಿ ಪ್ರಶಾಂತ್ (29) ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ.

ಕುಶಾಲನಗರದ ಶೈಲಜಾ ಬಡವಾಣೆಯಲ್ಲಿರುವ ಸ್ಮಶಾನದ ಜಾಗದಲ್ಲಿ ಗಾಂಜಾ ಗಿಡಗಳನ್ನು ಬೆಳೆಸಿರುವ ಕುರಿತು ಖಚಿತ ಮಾಹಿತಿ ದೊರೆತ ಹಿನ್ನಲೆಯಲ್ಲಿ ಪೊಲೀಸರು ದಾಳಿ ನಡೆಸಿದರು.

ಸೋಮವಾರಪೇಟೆ ಡಿವೈಎಸ್‍ಪಿ ಆರ್.ವಿ.ಗಂಗಾಧರಪ್ಪ, ಕುಶಾಲನಗರ ಪಿಐ ಪ್ರಕಾಶ್.ಬಿ.ಜಿ, ಪಿಎಸ್‍ಐ ಗೀತಾ ಸಿಬ್ಬಂದಿಗಳು ಹಾಗೂ ಡಿಸಿಆರ್‍ಬಿ ಸಿಬ್ಬಂದಿಗಳ ವಿಶೇಷ ತಂಡ ಕಾರ್ಯಾಚರಣೆ ನಡೆಸಿತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News