×
Ad

ಪೊನ್ನಂಪೇಟೆ | ಲಾರಿ ಢಿಕ್ಕಿಯಾಗಿ ಬಾಲಕಿ ಮೃತ್ಯು

Update: 2024-11-27 23:01 IST

ಮಡಿಕೇರಿ : ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಬಾಲಕಿಯೊಬ್ಬಳು ಮೃತಪಟ್ಟಿರುವ ಘಟನೆ ಪೊನ್ನಂಪೇಟೆ ತಾಲ್ಲೂಕಿನ ತಿತಿಮತಿ ಸಮೀಪದ ಮಜ್ಜಿಗೆಹಳ್ಳ ನರ್ಸರಿ ಬಳಿ ನಡೆದಿದೆ.

ಸ್ಥಳೀಯ ನಿವಾಸಿ ರವಿ ಹಾಗೂ ಸಿಂಧು ದಂಪತಿ ಪುತ್ರಿ ಗಾನವಿ(6) ಮೃತ ದುರ್ದೈವಿ. ಈಕೆ ಮಜ್ಜಿಗೆಹಳ್ಳ ಪರಂಬು ಶಾಲೆಯ 1ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಗೋಣಿಕೊಪ್ಪ ಕಡೆಯಿಂದ ಹುಣಸೂರು ಕಡೆಗೆ ತೆರಳುತ್ತಿದ್ದ ಲಾರಿ ರಸ್ತೆಯಲ್ಲಿ ನಡೆದುಕೊಂಡು ಮನೆಗೆ ಹೋಗುತ್ತಿದ್ದ ಗಾನವಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಲಾರಿ ಚಾಲಕ ಕನಕಪುರ ಮೂಲದ ಹರೀಶ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಲಾರಿ ಢಿಕ್ಕಿ ಹೊಡೆದ ಸಂದರ್ಭ ಗಂಭೀರ ಗಾಯಗೊಂಡಿದ್ದ ಗಾನವಿಯನ್ನು ಸಾರ್ವಜನಿಕರು ಆಟೋ ರಿಕ್ಷಾದಲ್ಲಿ ತಿತಿಮತಿ ವಿವೇಕಾನಂದ ಆಸ್ಪತ್ರೆಗೆ ಕರೆದೊಯ್ದರಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಳು ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಗೋಣಿಕೊಪ್ಪ ವೃತ್ತನಿರೀಕ್ಷಕ ಶಿವರಾಜ್ ಆರ್.ಮುಧೋಳ್, ಠಾಣಾಧಿಕಾರಿ ಪ್ರದೀಪ್ ಕುಮಾರ್, ಎಎಸ್‍ಐ ದೇವರಾಜ್ ಸಿಬಂದಿಗಳಾದ ನೆಹರು, ಸೀರಿಲ್, ಭರತ್ ರಾಘವೇಂದ್ರ ಹಾಗೂ ಶುಭ ಮತ್ತಿತರರು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಈ ಅಪಘಾತ ಘಟನೆ ಕುರಿತು ತಿತಿಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News