ಮಡಿಕೇರಿ | ಎಚ್.ಎ.ಹಂಸ ಅವರಿಗೆ ಹೊದ್ದೂರು ಗ್ರಾಮ ಪಂಚಾಯಿತಿ ವತಿಯಿಂದ ಸನ್ಮಾನ
ಮಡಿಕೇರಿ: ಜ.26ರಂದು ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಸರಕಾರದ ವಿಶೇಷ ಅತಿಥಿಯಾಗಿ ಆಯ್ಕೆಯಾಗಿರುವ ಹೊದ್ದೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಎಚ್.ಎ ಹಂಸ ಕೊಟ್ಟಮುಡಿ ಅವರಿಗೆ ಗ್ರಾಮ ಪಂಚಾಯಿತಿ ಪಿಡಿಓ, ಕಾರ್ಯದರ್ಶಿ, ಸಿಬ್ಬಂದಿವರ್ಗ, ಆಡಳಿತ ಮಂಡಳಿ, ಗ್ರಾಮಸ್ಥರು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಹೊದ್ದೂರು ಗ್ರಾಮ ಪಂಚಾಯಿತಿ ಕಛೇರಿಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭ ಸನ್ಮಾನ ಸ್ವೀಕರಿಸಿ ಮಾತನಾಡಿದ ಎಚ್.ಎ.ಹಂಸ, ಗಣರಾಜ್ಯೋತ್ಸವದ ವಿಶೇಷ ಅತಿಥಿಯಾಗಿ ಭಾಗವಹಿಸಲು ನೀವೆಲ್ಲರೂ ಕಾರಣ. ಎಲ್ಲರ ಒಗ್ಗಟ್ಟಿನ ಪರಿಶ್ರಮದಿಂದ ಹೊದ್ದೂರು ಗ್ರಾಮ ಪಂಚಾಯಿತಿ ರಾಷ್ಟ್ರ ಮಟ್ಟದಲ್ಲಿ ಹೆಸರುಗಳಿಸಿದೆ. ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯಿತಿ ಮತ್ತಷ್ಟು ಅಭಿವೃದ್ಧಿಯಾಗಬೇಕಿದ್ದು, ತಮ್ಮೆಲ್ಲರ ಸಹಕಾರ ಅತೀ ಮುಖ್ಯ ಎಂದು ಹೇಳಿದರು.
ಈ ಸಂದರ್ಭ ಗ್ರಾಮ ಪಂಚಾಯತಿ ಉಪಾಧ್ಯಕ್ಷರಾದ ಅನುರಾಧ, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷರಾದ ಕೆ.ಮೊಣ್ಣಪ್ಪ, ಸದಸ್ಯರಾದ ಚೌರೀರ ಅನಿತಾ, ಪಿಡಿಓ ಎ.ಎ. ಅಬ್ದುಲ್ಲಾ. ವಿ.ಎ.ಒ ಸಂತೋಷ್ ಪಾಟೀಲ್ ಗ್ರಾಮ ಪಂಚಾಯತಿ ಕಾರ್ಯದರ್ಶಿ ಚಂದ್ರಶೇಖರ್, ಸಿಬ್ಬಂದಿ ವರ್ಗ ಮತ್ತು ಗ್ರಾಮಸ್ಥರು ಇದ್ದರು.