×
Ad

ಸೋಮವಾರಪೇಟೆ| ಲಕ್ಷಾಂತರ ರೂ. ಮೌಲ್ಯದ ಕಾಳು ಮೆಣಸು ಕಳ್ಳತನ: ನಾಲ್ವರು ಆರೋಪಿಗಳ ಬಂಧನ

Update: 2025-10-29 22:38 IST

ಮಡಿಕೇರಿ: ಲಕ್ಷಾಂತರ ರೂ. ಮೌಲ್ಯದ ಕಾಳು ಮೆಣಸು ಕಳ್ಳತನ ಆರೋಪದಡಿ ನಾಲ್ವರು ಆರೋಪಿಗಳನ್ನು ಮಾಲು ಸಹಿತ ಬಂಧಿಸುವಲ್ಲಿ ಸೋಮವಾರಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಸೋಮವಾರಪೇಟೆ ನಿವಾಸಿ ಸುಮಂತ್, ಕಿಬೆಟ್ಟ ಗ್ರಾಮದ ಕೀರ್ತಿ, ಕೊಣನೂರು ಗ್ರಾಮದ ಮಣಿಕಂಠ ಹಾಗೂ ಕೆ.ಆರ್.ಪೇಟೆಯ ನಿವಾಸಿ ಸಚಿನ್ ಬಂಧಿತ ಆರೋಪಿಗಳಾಗಿದ್ದಾರೆ.

ಇತ್ತೀಚೆಗೆ ಕಾಳು ಮೆಣಸು ಕಳ್ಳತನದ ಎರಡು ಪ್ರತ್ಯೇಕ ಪ್ರಕರಣಗಳು ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ಪ್ರಕರಣದ ಕುರಿತು ತನಿಖೆ ಕೈಗೊಂಡ ಪೊಲೀಸರು ಆರೋಪಿಗಳ ಸಹಿತ 2.4 ಲಕ್ಷ ರೂ. ಮೌಲ್ಯದ 360 ಕೆ.ಜಿ ಕಾಳು ಮೆಣಸು ಮತ್ತು ಕಳ್ಳತನಕ್ಕೆ ಬಳಸಿದ್ದ ಗೂಡ್ಸ್ ವಾಹನವನ್ನು ವಶಪಡಿಸಿಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News