×
Ad

ಪೊನ್ನಂಪೇಟೆ: ಕಾಡಾನೆ ದಾಳಿ; ವ್ಯಕ್ತಿ ಮೃತ್ಯು

Update: 2025-07-08 13:59 IST

ಮಡಿಕೇರಿ ಜು.8 : ಕಾಡಾನೆ ದಾಳಿಯಲ್ಲಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಪೊನ್ನಂಪೇಟೆ ತಾಲ್ಲೂಕಿನ ಪೊನ್ನಪ್ಪಸಂತೆ ಗ್ರಾಮದಲ್ಲಿ ಮಂಗಳವಾರ ಮುಂಜಾನೆ ನಡೆದಿದೆ.

ಸುಮಾರು 50 ವರ್ಷದ ಮೃತ ವ್ಯಕ್ತಿಯನ್ನು ಮಾನಸಿಕ ಅಸ್ವಸ್ಥನೆಂದು ಹೇಳಲಾಗಿದೆ. ಕಾಡಾನೆ ಮೊದಲು ಸೈಕಲ್ ನಲ್ಲಿ ಬರುತ್ತಿದ್ದ ಸ್ಥಳೀಯ ಗ್ರಾಮಸ್ಥ ಅಜಯ್ ಎಂಬುವವರ ಮೇಲೆ ದಾಳಿ ಮಾಡಲು ಮುಂದಾಗಿದೆ. ಅಜಯ್ ಅವರು ಸೈಕಲ್ ನ್ನು ಬಿಟ್ಟು ಓಡಿ ಹೋಗಿ ಪ್ರಾಣ ಉಳಿಸಿಕೊಂಡಿದ್ದಾರೆ. ಇದೇ ಸಂದರ್ಭ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದ ವ್ಯಕ್ತಿಯ ಮೇಲೆ ಕಾಡಾನೆ ಏಕಾಏಕಿ ದಾಳಿ ಮಾಡಿದ್ದು, ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

 ರಾಜೀನಾಮೆಗೆ ಆಗ್ರಹ 

ಕೊಡಗು ಜಿಲ್ಲೆಯಲ್ಲಿ ಕಾಡಾನೆ ದಾಳಿಯಿಂದ ಸರಣಿ ಸಾವುಗಳಾಗುತ್ತಿದ್ದು, ಇದಕ್ಕೆ ಅರಣ್ಯ ಇಲಾಖೆಯ ವೈಫಲ್ಯವೇ ಪ್ರಮುಖ ಕಾರಣವಾಗಿದೆ ಎಂದು ಆಮ್ ಆದ್ಮಿ ಪಾರ್ಟಿಯ ಕಾರ್ಯದರ್ಶಿ ಭೋಜಣ್ಣ ಸೋಮಯ್ಯ ಅವರು ಆರೋಪಿಸಿದ್ದಾರೆ. ಅರಣ್ಯ ಸಚಿವ ಈಶ್ವರ ಖಂಡ್ರೆ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಅವರು ಒತ್ತಾಯಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News