ಸಯ್ಯಿದ್ ಆಟಕ್ಕೋಯ ತಂಙಳ್ ಎರುಮಾಡ್ ನಿಧನ
ಮಡಿಕೇರಿ: ಕೊಡಗು ಜಿಲ್ಲೆಯ ಎಮ್ಮೆಮಾಡು ನಿವಾಸಿ ಸಯ್ಯಿದ್ ಆಟಕ್ಕೋಯ ತಂಙಳ್ ಅಲ್ ಐದರೂಸಿ ನಿಧನರಾದರು. ಅವರಿಗೆ 75 ವರ್ಷ ಪ್ರಾಯವಾಗಿತ್ತು.
ಎಸ್ ವೈ ಎಸ್ ಕರ್ನಾಟಕ ರಾಜ್ಯ ಉಪಾಧ್ಯಕ್ಷರಾದ ಸಯ್ಯಿದ್ ಇಲ್ಯಾಸ್ ತಂಙಳ್ ಎಮ್ಮೆಮಾಡು, ಕೆಸಿಎಫ್ ಒಮಾನ್ ರಾಷ್ಟ್ರೀಯ ನಾಯಕ ಸಯ್ಯಿದ್ ಆಬಿದ್ ಅಲ್ ಐದರೂಸಿ ಸೇರಿದಂತೆ ಐವರು ಗಂಡು, ಮೂವರು ಹೆಣ್ಣು ಮಕ್ಕಳು, ಪತ್ನಿ ಹಾಗೂ ಅಪಾರ ಬಂಧುಗಳನ್ನು ಅವರು ಅಗಲಿದ್ದಾರೆ.
ಎಮ್ಮೆಮಾಡು ಜುಮಾ ಮಸೀದಿ ವಠಾರದಲ್ಲಿ ನಡೆದ ಅಂತ್ಯ ಸಂಸ್ಕಾರಕ್ಕೆ ಕೋಝಿಕ್ಕೋಡ್ ಮರ್ಕಝ್ ವಿದ್ಯಾ ಸಂಸ್ಥೆಯ ಅಧ್ಯಕ್ಷ ಸಯ್ಯಿದ್ ಅಲೀ ಬಾಫಖೀ ತಂಙಳ್ ನೇತೃತ್ವ ನೀಡಿದರು.
ಸಂತಾಪ: ಇಂಡಿಯನ್ ಗ್ರಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎ ಪಿ ಉಸ್ತಾದ್, ಸಮಸ್ತ ಕೇಂದ್ರ ಮುಶಾವರ ಕಾರ್ಯದರ್ಶಿ ಖಲೀಲುಲ್ ಬುಖಾರಿ ತಂಙಳ್, ಕರ್ನಾಟಕ ಜಂಇಯತುಲ್ ಉಲಮಾ ರಾಜ್ಯಾಧ್ಯಕ್ಷ ಝೈನುಲ್ ಉಲಮಾ ಮಾಣಿ ಉಸ್ತಾದ್, ಮುಸ್ಲಿಂ ಜಮಾಅತ್ ಕಾರ್ಯದರ್ಶಿ ಡಾ. ಝೈನಿ ಕಾಮಿಲ್, ಎಸ್ ವೈ ಎಸ್ ರಾಜ್ಯಾಧ್ಯಕ್ಷ ಬಶೀರ್ ಸಅದಿ ಬೆಂಗಳೂರು, ಪ್ರಧಾನ ಕಾರ್ಯದರ್ಶಿ ಕೆ ಎಂ ಅಬೂಬಕರ್ ಸಿದ್ದೀಖ್ ಸೇರಿದಂತೆ ಹಲವು ಗಣ್ಯರು ಸಂತಾಪ ಸಲ್ಲಿಸಿದ್ದಾರೆ.