ಸೋಮವಾರಪೇಟೆ | ಇಂದಿರಾ ಕ್ಯಾಂಟಿನ್ ಉದ್ಘಾಟಿಸಿದ ಶಾಸಕ ಡಾ.ಮಂತರ್‌ಗೌಡ
ಸೋಮವಾರಪೇಟೆ : ನಗರಾಭಿವೃದ್ಧಿ ಮತ್ತು ಪೌರಾಡಳಿತ ಇಲಾಖೆ ವತಿಯಿಂದ ಸೋಮವಾರಪೇಟೆ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ನಿರ್ಮಾಣವಾಗಿರುವ ಇಂದಿರಾ ಕ್ಯಾಂಟೀನ್‍ನನ್ನು ಶಾಸಕ ಡಾ.ಮಂತರ್‌ಗೌಡ ಸೋಮವಾರ ಉದ್ಘಾಟಿಸಿದರು.
ಈ ವೇಳೆ ಮಾತನಾಡಿದ ಅವರು, ಸೋಮವಾರಪೇಟೆ ಪಟ್ಟಣ ಹಾಗು ಸುತ್ತಮುತ್ತಲಿನ ಬಡವರು, ಕಾರ್ಮಿಕರು, ರೈತರು, ಗ್ರಾಮೀಣ ಜನರು, ವಿದ್ಯಾರ್ಥಿಗಳು ಸೇರಿದಂತೆ ಎಲ್ಲ ವರ್ಗದ ಜನತೆ ಇಂದಿರಾ ಕ್ಯಾಂಟೀನ್ ಸೌಲಭ್ಯ ಪಡೆದುಕೊಳ್ಳಬೇಕು. ನನ್ನ ಕ್ಷೇತ್ರ ಹಸಿವು ಮುಕ್ತವಾಗಬೇಕು ಎಂಬ ಬದ್ದತೆಯಿಂದ ಮೂರು ಇಂದಿರಾ ಕಾಂಟೀನ್ ನನ್ನು ತಂದಿದ್ದೇನೆ. ಇಂತಹ ಜನಕಲ್ಯಾಣ ಯೋಜನೆಗಳು ಕಾಂಗ್ರೆಸ್ ನೇತೃತ್ವದ ಸರ್ಕಾರದಿಂದ ಮಾತ್ರ ಸಾಧ್ಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಇಂದಿರಾಗಾಂದಿ ಅಭಿಮಾನಿಗಳ ಸಂಘದ ಅಧ್ಯಕ್ಷ ಎಚ್.ಎ.ನಾಗರಾಜ್ ಅವರು ಮಾತನಾಡಿದರು.
ವೇದಿಕೆಯಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷೆ ಜಯಂತಿ ಶಿವಕುಮಾರ್, ಉಪಾಧ್ಯಕ್ಷೆ ಮೋಹಿನಿ, ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ಆರ್. ಮಹೇಶ್, ಸದಸ್ಯರಾದ ಶೀಲಾ ಡಿಸೋಜ, ಬಿ.ಸಿ.ವೆಂಕಟೇಶ್, ಪಿ.ಕೆ.ಚಂದ್ರು, ಮೃತ್ಯಂಜಯ, ಕಿರಣ್ ಉದಯ್‍ಶಂಕರ್, ಎಸ್.ಕೆ.ವಿನಿ, ತಹಶೀಲ್ದಾರ್ ಕೃಷ್ಣಮೂರ್ತಿ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಜಿ.ಎಂ.ಕಾಂತಾರಾಜು, ಸುಡಾ ಅಧ್ಯಕ್ಷ ಕೆ.ಎ.ಆದಂ, ಇಒ ಪರಮೇಶಕುಮಾರ್, ಸಿಒ ಸತೀಶ್, ಇಂಜಿನಿಯರ್ ಹೇಮಂತ್ ಇದ್ದರು.