×
Ad

ಎಸ್ಸೆಸೆಫ್‌ ಸಾಹಿತ್ಯೋತ್ಸವ| ಇಂಗ್ಲಿಷ್ ಭಾಷಣ ಸ್ಪರ್ಧೆ : ಆದಿಲ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Update: 2025-10-06 14:32 IST

ಮಡಿಕೇರಿ ಅ.6 : ಸುನ್ನಿ ಸ್ಟೂಡೆಂಟ್ಸ್ ಫೆಡರೇಷನ್‍ನ ವತಿಯಿಂದ ಬೆಳ್ತಂಗಡಿ ತಾಲ್ಲೂಕಿನ ತುರ್ಕಳಿಕೆ ಎಂಬಲ್ಲಿ ನಡೆದ ರಾಜ್ಯ ಮಟ್ಟದ ಸಾಹಿತ್ಯೋತ್ಸವ ಕಾರ್ಯಕ್ರಮದ ಇಂಗ್ಲಿಷ್ ಭಾಷಣ ಸ್ಪರ್ಧೆಯಲ್ಲಿ ಕೊಡಗಿನ ಬಿ.ಎ.ಆದಿಲ್ ಪ್ರಥಮ ಸ್ಥಾನಗಳಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

ಗೋಣಿಕೊಪ್ಪಲಿನ ಅತ್ತೂರು ನ್ಯಾಷನಲ್ ಅಕಾಡೆಮಿ ಶಾಲೆಯ 9ನೇ ತರಗತಿಯ ವಿದ್ಯಾರ್ಥಿಯಾಗಿರುವ ಆದಿಲ್, ಅತ್ತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಸಲೀನ ಅಶ್ರಫ್ ಹಾಗೂ ಪಾಲಿಬೆಟ್ಟ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಅಶ್ರಫ್ ಮಾಸ್ಟರ್ ದಂಪತಿಯ ಪುತ್ರ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News