ವಿರಾಜಪೇಟೆ | ಗಾಂಜಾ ಸಾಗಾಟ : ಓರ್ವ ಬಂಧನ, 3.90 ಕೆ.ಜಿ ಮಾಲು ವಶ
Update: 2025-02-02 21:38 IST
ನಿಧಿನ್ (28)
ಮಡಿಕೇರಿ : ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪೆರಂಬಾಡಿ ಜಂಕ್ಷನ್ ಬಳಿ ಗಾಂಜಾ ಸರಬರಾಜು ಮಾಡುತ್ತಿದ್ದ ಆರೋಪದಡಿ ಓರ್ವನನ್ನು ಬಂಧಿಸಿ ಸುಮಾರು 3.90 ಕೆ.ಜಿ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ ನಿವಾಸಿ ನಿಧಿನ್ (28) ಬಂಧಿತ ಆರೋಪಿಯಾಗಿದ್ದು, ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ವಿರಾಜಪೇಟೆ ಡಿವೈಎಸ್‍ಪಿ ಮಹೇಶ್ ಕುಮಾರ್, ಸಿಪಿಐ ಅನೂಪ್ ಮಾದಪ್ಪ, ಪಿಎಸ್‍ಐ ಪ್ರಮೋದ್ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದರು. ಅಧಿಕಾರಿಗಳ ಹಾಗೂ ಪೊಲೀಸರ ಕಾರ್ಯದಕ್ಷತೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಶ್ಲಾಘಿಸಿದ್ದಾರೆ. ಮಾದಕ ವಸ್ತು ಸಾಗಾಟ ಮತ್ತು ಮಾರಾಟ ಮಾಡುತ್ತಿರುವವರ ಕುರಿತು ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಅವರು ಮನವಿ ಮಾಡಿದ್ದಾರೆ.