×
Ad

ವಾರ್ತಾಭಾರತಿಯ ವಿಶೇಷ ವರದಿಗಾರ ಇಸ್ಮಾಯಿಲ್ ಕಂಡಕರೆಗೆ ಅತ್ಯುತಮ ಕ್ರೀಡಾ ವರದಿ ಪ್ರಶಸ್ತಿ

Update: 2025-06-14 12:30 IST

ಕೊಡಗು: ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರಕಟಗೊಂಡಿದ್ದು, ವಾರ್ತಾಭಾರತಿಯ ವಿಶೇಷ ವರದಿಗಾರ ಇಸ್ಮಾಯಿಲ್ ಕಂಡಕರೆ ಅತ್ಯುತಮ ಕ್ರೀಡಾ ವರದಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ವಾರ್ತಾಭಾರತಿ ಪತ್ರಿಕೆಯಲ್ಲಿ ಪ್ರಕಟವಾದ "ಕರ್ನಾಟಕ ಸೂಪರ್ ಡಿವಿಷನ್ ಗೆ ಲಗ್ಗೆಯಿಟ್ಟ ಕೊಡಗಿನ ಪ್ರಥಮ ಮಹಿಳಾ ಫುಟ್ಬಾಲ್ ಕ್ಲಬ್-ಯುನೈಟೆಡ್ ಎಫ್.ಸಿ ಕೊಡಗು" ಎಂಬ ವಿಶೇಷ ವರದಿಯು, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್ ಪೊನ್ನಣ್ಣ ಅವರು ತಮ್ಮ ತಂದೆ ದಿ| ಎ.ಕೆ ಸುಬ್ಬಯ್ಯ ಹಾಗೂ ತಾಯಿ ದಿ| ಎ.ಎಸ್ ಪೊನ್ನಮ್ಮ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ಕ್ರೀಡಾ ವರದಿ ಪ್ರಶಸ್ತಿಗೆ ಆಯ್ಕೆಯಾಗಿದೆ.

ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ 2024 ನೇ ಸಾಲಿನ ವಾರ್ಷಿಕ ಪ್ರಶಸ್ತಿಗೆ ಆರು ಮಂದಿ ಪತ್ರಕರ್ತರು ಆಯ್ಕೆಯಾಗಿದ್ದಾರೆ.  ಜೂನ್ 22 ರಂದು ನಡೆಯಲಿರುವ ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಎ.ಎಸ್ ಮುಸ್ತಫ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News