×
Ad

ಮಡಿಕೇರಿ: ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಬಲಿ

Update: 2024-07-09 17:54 IST

ಸಾಂದರ್ಭಿಕ ಚಿತ್ರ

ಮಡಿಕೇರಿ: ಕಾಡಾನೆ ದಾಳಿಗೆ ಮಹಿಳೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದೇವರಕಾಡು ಪೈಸಾರಿಯಲ್ಲಿ ನಡೆದಿದೆ. ಗ್ರಾಮದ ಗೌರಿ (65) ಮೃತ ಮಹಿಳೆ. ಸಂಜೆ ಎಂದಿನಂತೆ ಕೂಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಸಂದರ್ಭ ಕಾಡಾನೆ ದಾಳಿ ನಡೆಸಿದೆ.

ಸ್ಥಳಕ್ಕೆ ತಿತಿಮತಿ ಎಸಿಎಫ್ ಗೋಪಾಲ್, ಆರ್‌ಎಫ್‍ಓ ಗಂಗಾಶಧರ್ ಸೇರಿದಂತೆ ಸಿಬ್ಬಂದಿಗಳು ಹಾಗೂ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್, ಕಾರ್ಯದರ್ಶಿ ಎ.ಜೆ.ಬಾಬು, ದೇವಪುರ ವಲಯ ಕಾಂಗ್ರೆಸ್ ಅಧ್ಯಕ್ಷ ಬಸಂತ್ ಕುಮಾರ್, ತಿತಿಮತಿ ಗ್ರಾ.ಪಂ ಸದಸ್ಯ ಅಪ್ರೋಸ್ ಭೇಟಿ ನೀಡಿ ಪರಿಶೀಲಿಸಿದ್ದು, ಮೃತದೇಹವನ್ನು ಗೋಣಿಕೊಪ್ಪ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದರು.

ಗೋಣಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳದಲ್ಲಿ ಗೋಣಿಕೊಪ್ಪ ಠಾಣಾಧಿಕಾರಿ ರೂಪಾದೇವಿ ಬೀರಾದರ್, ವೃತ್ತ ನಿರೀಕ್ಷಕ ಶಿವರಾಜ್ ಮುಧೋಳ್ ಹಾಗೂ ಸಿಬ್ಬಂದಿಗಳು ಹಾಜರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News