×
Ad

ಕೊಡಗಿನಲ್ಲಿ ಗಾಳಿ-ಮಳೆ: ಮರ ಬಿದ್ದು ಓರ್ವ ಮೃತ್ಯು

Update: 2025-05-27 11:05 IST

ಮಡಿಕೇರಿ, ಮೇ 27: ಕೊಡಗು ಜಿಲ್ಲೆಯಲ್ಲಿ ಗಾಳಿ ಸಹಿತ ಭಾರೀ ಮಳೆಯಾಗುತ್ತಿದ್ದು, ಮರ ಬಿದ್ದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಅಮ್ಮತ್ತಿ ಹೋಬಳಿ ಬಾಡಗ ಬಾಣಂಗಾಲ ಗ್ರಾಮದ ಜನತಾ ಕಾಲನಿಯಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.

 ಸ್ಥಳೀಯ ನಿವಾಸಿ ಪಿ.ಸಿ.ವಿಷ್ಣು ಬೆಳ್ಳಿಯಪ್ಪ (65) ಮೃತಪಟ್ಟವರು. ಇಂದು ಬೆಳಗ್ಗೆ 7:30ರ ಸುಮಾರಿಗೆ ವಿಷ್ಣು ಬೆಳ್ಳಿಯಪ್ಪರ ಮೇಲೆ ಮಾವಿನಮರ ಉರುಳಿಬಿದ್ದಿದೆ. ತಕ್ಷಣ ಇವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಗ್ರೇಡ್ 2 ತಹಶೀಲ್ದಾರರು, ಕಂದಾಯ ಪರಿವೀಕ್ಷಕರು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News