ಕೋಲಾರ: ಡಿವೈಡರ್ ಗೆ ಬಸ್ ಢಿಕ್ಕಿ; ಎಂಟು ಮಂದಿಗೆ ಗಾಯ
Update: 2025-06-25 11:53 IST
ಕೋಲಾರ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಡಿವೈಡರ್ ಗೆ ಢಿಕ್ಕಿಯಾಗಿ ಎಂಟು ಮಂದಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಕೆಜಿಎಫ್ ಪಟ್ಟಣದ ಬೆಮೆಲ್ ನಗರದಲ್ಲಿ ಬುಧವಾರ ಮುಂಜಾನೆ ನಡೆದಿದೆ.
ಕೋಲಾರದ ನರಸಾಪುರ ವಿಸ್ಟ್ರಾನ್ ಕಂಪನಿಗೆ ಸೇರಿದ ಖಾಸಗಿ ಬಸ್ ಅಪಘಾತಕ್ಕೀಡಾಗಿದೆ. ಕಂಪನಿಯ ಮೊದಲ ಪಾಳಿಯ ಕಾರ್ಮಿಕರನ್ನು ಕರೆದುಕೊಂಡು ಹೋಗುವ ವೇಳೆ ಚಾಲಕ ನಿದ್ದೆ ಮಂಪರಿನಲ್ಲಿದ್ದ ಕಾರಣ ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿಯಾಗಿದೆ. ಗಾಯಾಳುಗಳನ್ನು ಕೆಜಿಎಫ್ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.