Kolar | ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ 7 ವರ್ಷದ ಬಾಲಕ ಮೃತ್ಯು
Update: 2026-05-19 22:02 IST
ಕೋಲಾರ: ಸೋಮವಾರ ರಾತ್ರಿ ಬಿದ್ದ ಮಳೆಯಿಂದ ತುಂಡಾಗಿ ಕೆಳಗೆ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ 7 ವರ್ಷದ ಬಾಲಕನೋರ್ವ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ.
ಕೋಲಾರ ನಗರದ ಪುಲ್ ಷಾ ಮೊಹಲ್ಲಾದ ನಿವಾಸಿ ಇಮ್ತಿಯಾಝ್ ಎಂಬವರ ಪುತ್ರ ಸೈಯದ್ ರೆಹಮಾನ್ ಮೃತಪಟ್ಟ ಬಾಲಕ.
ಕೋಲಾರ ಗಲ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.