Kolara | ಸ್ಮಶಾನದಲ್ಲಿ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ
ಸಾಂದರ್ಭಿಕ ಚಿತ್ರ
ಕೋಲಾರ: ನೇಣು ಬಿಗಿದುಕೊಂಡು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಯುವಕನೋರ್ವನ ಮೃತದೇಹ ಕೋಲಾರ ನಗರದ ಸ್ಮಶಾನದಲ್ಲಿ ಮಂಗಳವಾರ ಬೆಳಗ್ಗೆ ಪತ್ತೆಯಾಗಿದೆ.
ಮೃತರನ್ನು ಕೋಲಾರ ನಗರದ ಗಾಂಧಿನಗರದ ವಾಸಿ ಚರಣ್ (28) ಎಂದು ಗುರುತಿಸಲಾಗಿದೆ. ಮಂಗಳವಾರ ಬೆಳಗ್ಗೆ ವಾಕಿಂಗ್ ಮಾಡುತ್ತಿದ್ದವರು ಮೃತದೇಹ ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಕೊಲೆ ಪ್ರಕರಣವೊಂದರಲ್ಲಿ ಜೈಲುಪಾಲಾಗಿದ್ದ ಚರಣ್ ಎರಡು ತಿಂಗಳ ಹಿಂದೆ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ. ಈ ಮಧ್ಯೆ ಚರಣ್ ಜೈಲಿನಲ್ಲಿದ್ದ ಆತನ ಪತ್ನಿ ವಿಷ ಸೇವಿಸಿ ಅತ್ಮಹತ್ಯೆ ಮಾಡಿಕೊಂಡಿದ್ದಳು. ಇದೀಗ ಪತ್ನಿಯ ಸಮಾಧಿ ಬಳಿಯೇ ಇದ್ದ ಮರವೊಂದಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಚರಣ್ ಮೃತದೇಹ ಪತ್ತೆಯಾಗಿದೆ.
ಸ್ಥಳಕ್ಕೆ ಗಲ್ ಪೇಟೆ ಪೊಲೀಸರು ದಾವಿಸಿ ತನಿಖೆ ನಡೆಸುತ್ತಿದ್ದಾರೆ.
ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.